ಬೆಂಗಳೂರು ನಗರದಲ್ಲಿ ಸಿನಿಮೀಯ ರೀತಿಯಲ್ಲಿ ಜ್ಯೋತಿಷಿಯ ಪುತ್ರನನ್ನು ಅಪಹರಿಸಿ, 5 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಯನ್ನು ಎಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಜ್ಯೋತಿಷಿ ಮಣಿವಾಸಕನ್ ಅವರ 18 ವರ್ಷದ ಪುತ್ರನನ್ನು ತುಮಕೂರಿನ ಅರ್ಜುನ್ ಅಪಹರಣ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಎಂದು ಪೊಲೀಸರು ಹೇಳಿದರು.
ಡ್ರಾಪ್ ಕೇಳುವ ನೆಪದಲ್ಲಿ ಕಾರನ್ನು ಅಡ್ಡಗಟ್ಟಿದ್ದ ಆರೋಪಿ ಯುವಕ ಪುತ್ರನ ಹಣೆಗೆ ಗನ್ ಯಿಟ್ಟು ಅಪಹರಣ ಮಾಡಿದ್ದ. ಬಳಿಕ ಜ್ಯೋತಿಷಿಗೆ ವಾಟ್ಸ್ ಆ್ಯಪ್ ಕರೆ ಮಾಡಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


