ಚಿತ್ರದುರ್ಗದ ‘ಶ್ರೀ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠ’ ಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ಇದೇ 16ಕ್ಕೆ ಮುಂದೂಡಿದೆ.
ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಒಟ್ಟು ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆಗೆ ನಿಗದಿಪಡಿಸಿತ್ತು.
ಆದರೆ, ಮಧ್ಯಾಹ್ನದ ಕಲಾಪದ ಅವಧಿಯನ್ನು 3. 45ಕ್ಕೇ ಮುಕ್ತಾಯಗೊಳಿಸಲಾದ ಕಾರಣ ಇದೇ 16ರ ಬೆಳಗ್ಗೆ 10 ಗಂಟೆಗೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


