ಆರೋಗ್ಯ ಇಲಾಖೆಯು ಪ್ರಾಯೋಗಿಕವಾಗಿ ಶೇಕಡ 25 ರಷ್ಟು ‘ನಮ್ಮ ಕ್ಲಿನಿಕ್’ ಗಳಲ್ಲಿ ಮಧ್ಯಾಹ್ನ 12 ರಿಂದ ರಾತ್ರಿ 8 ಗಂಟೆಯವರೆಗೆ ಸೇವೆ ಒದಗಿಸಲು ಮುಂದಾಗಿದೆ.
ಸದ್ಯ ನಮ್ಮ ಕ್ಲಿನಿಕ್ ಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12. 30 ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4. 30 ರವರೆಗೆ ಸೇವೆ ನೀಡುತ್ತಿವೆ. ಇದರಿಂದಾಗಿ ಕೂಲಿ ಕಾರ್ಮಿಕರು ಹಾಗೂ ಉದ್ಯೋಗಸ್ಥರಿಗೆ ಸಮರ್ಪಕವಾಗಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಇಲಾಖೆಗೆ ಬಂದಿದ್ದವು. ಹೀಗಾಗಿ, ಈ ಬಗ್ಗೆ ಅಧಿಕಾರಿಗಳ ಜತೆಗೆ ಚರ್ಚಿಸಿರುವ ಸಚಿವ ದಿನೇಶ್ ಗುಂಡೂರಾವ್, ಸಂಜೆ ಸೇವೆ ಒದಗಿಸುವ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


