ಬೆಂಗಳೂರು ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ ವಿಭಾಗದಲ್ಲಿ 760 ಲಕ್ಷ ವೆಚ್ಚದಲ್ಲಿ 1,324 ಚದರ ಅಡಿ ವಿಸ್ತೀರ್ಣದಲ್ಲಿ ನೂತನವಾಗಿ ನಿರ್ಮಿಸಿರುವ ಟಿವಿ ಸ್ಟುಡಿಯೊವನ್ನು ಲೋಕಾರ್ಪಣೆ ಮಾಡಲಾಯಿತು. ಉನ್ನತ ಶಿಕ್ಷಣ ಸಚಿವ ಡಾ. ಎಂ. ಸಿ. ಸುಧಾಕರ್ ಸ್ಟುಡಿಯೋ ಉದ್ಘಾಟಿಸಿದರು.
‘ಮಾಧ್ಯಮ ಸಂಸ್ಥೆಗಳಿಗೆ ಅಗತ್ಯವಿರುವ ತಾಂತ್ರಿಕತೆ ಪರಿಣತಿಯನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು. ಅದಕ್ಕೆ ಬೇಕಾದ ಎಲ್ಲ ಸೌಕರ್ಯಗಳು ಈ ನೂತನ ಸ್ಟುಡಿಯೊದಲ್ಲಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು. ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಡಾ. ಎಂ. ಸಿ. ಸುಧಾಕರ್ ಲ್ಯಾಪ್‌ಟಾಪ್ ವಿತರಣೆ ಮಾಡಿದರು.
ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್. ಎಂ., ಕುಲ ಸಚಿವರಾದ ಶೇಕ್ ಲತೀಫ್, ಮೌಲ್ಯಮಾಪನ ವಿಭಾಗದ ಕುಲಸಚಿವ ಸಿ. ಶ್ರೀನಿವಾಸ್, ಹಣಕಾಸು ಅಧಿಕಾರಿ ಅಜಿತ್ ಕುಮಾರ್ ಹೆಗ್ಡೆ, ವಿದ್ಯುನ್ಮಾನ ವಿಭಾಗದ ಸಂಯೋಜಕಿ ರಾಜೇಶ್ವರಿ, ಸಹ ಪ್ರಾಧ್ಯಾಪಕರಾದ ವಾಹಿನಿ, ಟಿ. ಶ್ರೀಪತಿ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


