ಬಿಟ್ ಕಾಯಿನ್ (ಬಿಟಿಸಿ) ಅಕ್ರಮ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಹ್ಯಾಕರ್ ಶ್ರೀಕೃಷ್ಣ ಹಾಗೂ ಇತರರ ವಿರುದ್ಧ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಅಧಿಕಾರಿಗಳ ವಿರುದ್ಧವೇ ಇದೀಗ ಎಫ್‌ಐಆರ್ ದಾಖಲಾಗಿದೆ.
ಆರೋಪಿಗಳಿಂದ ಜಪ್ತಿ ಮಾಡಲಾಗಿದ್ದ ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್, ಹಾರ್ಡ್‌ಡಿಸ್ಕ್, ಪೆನ್ ಡ್ರೈವ್ ಗಳಲ್ಲಿರುವ ಮಾಹಿತಿಯನ್ನು ತಿರುಚಿರುವ ಸಿಸಿಬಿ ಅಧಿಕಾರಿಗಳು ಹಾಗೂ ಇತರರು, ಸಾಕ್ಷ್ಯ ನಾಶಪಡಿಸಿ ಅಪರಾಧ ಎಸಗಿದ್ದಾರೆ ಎಂದು ಆರೋಪಿಸಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಡಿವೈಎಸ್ಪಿ ಕೆ. ರವಿಶಂಕರ್ ಅವರು ಕಾಟನ್ ಪೇಟೆ ಠಾಣೆಗೆ ಆಗಸ್ಟ್ 9ರಂದು ದೂರು ನೀಡಿದ್ದಾರೆ.
‘ಕೆಂಪೇಗೌಡ ನಗರ ಠಾಣೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ್ದ ತನಿಖಾಧಿಕಾರಿ, ತಂಡದಲ್ಲಿದ್ದ ಸಿಸಿಬಿ ಅಧಿಕಾರಿಗಳು ಹಾಗೂ ಇತರೆ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣದ ತನಿಖೆಯು ಎಸ್ ಐಟಿ ಅಧಿಕಾರಿಗಳಿಗೆ ವರ್ಗಾವಣೆ ಆಗಲಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


