ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಎನ್ನುವಂತೆ ಪ್ರತ್ಯೇಕ ಸೈಬರ್ ನೀತಿ ರೂಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ, ರಾಮನಗರ ಜಿಲ್ಲಾ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ. ಉಷಾ ಕದರಮಂಡಲಗಿ, ಇಂದಿರಾನಗರ ಆಸ್ಪತ್ರೆಯ ಸ್ತ್ರೀ ರೋಗ ತಜ್ಞೆ ಡಾ. ಎಸ್. ಟಿ ನಾಗಮಣಿ ಲೋಕಾಯುಕ್ತ ಟ್ರ್ಯಾಪ್ ನಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇವರನ್ನು ಸೇವೆಯಿಂದ ಕಡ್ಡಾಯ ನಿವೃತ್ತಿ ನಿರ್ಣಯ ಮಾಡಲು ನಿರ್ಧಾರ ಮಾಡಲಾಗಿದೆ.
ಪೋಕ್ಸೋ ಕೇಸಿನಲ್ಲಿ ಶಿಕ್ಷೆ ಪ್ರಕಟವಾದ ಹಿನ್ನೆಲೆಯಲ್ಲಿ ಹೂವಿನ ಹಡಗಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಎನ್ ಹಳ್ಳಿಗುಡಿ ಅವರನ್ನು ಸೇವೆಯಿಂದ ವಜಾಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


