ಗುತ್ತಿಗೆದಾರರು 3-4 ಸಚಿವರ ಮೇಲೆ ಕಮಿಷನ್ ಆರೋಪ ಮಾಡ್ತಿದ್ದಾರೆ. ಗ್ಯಾರಂಟಿ ಹೆಸರೇಳಿ ಜನರ ಕಿವಿಗೆ ಹೂವಿಟ್ಟು ಅಧಿಕಾರಕ್ಕೆ ಬಂದರು ಎಂದು ಬೆಂಗಳೂರಿನಲ್ಲಿ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈಗ ರಾಜ್ಯ ಜನರಿಗೆ ಮೋಸ ಮಾಡಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ರಾಜ್ಯದ ಜನತೆ ಈ ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಯಾರೇ ಲಂಚ ಕೇಳಿದ್ರೂ ನನ್ನ ಗಮನಕ್ಕೆ ತನ್ನಿ ಅಂತಾ ಡಿಕೆ ಹೇಳಿದ್ರು. ಡಿಕೆ ಗಮನಕ್ಕೆ ತಂದ್ರೆ ಯಾವ ಪರಿಸ್ಥಿತಿ ಬರುತ್ತೆ ಅಂತಾ ಅರ್ಥವಾಗಿದೆ. ತಮ್ಮ ಜೇಬು ತುಂಬಿಸಿ, ಕಾಂಗ್ರೆಸ್ ನವರ ಜೇಬನ್ನೂ ತುಂಬುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


