ಡಿ.ಕೆ.ಶಿವಕುಮಾರ್ ವಿರುದ್ಧ 15% ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿ ಬಿಜೆಪಿ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿ ನಾಯಕರು ಹತಾಶೆಯಿಂದ ಆರೋಪ ಮಾಡುತ್ತಿದ್ದಾರೆ. ಎಲ್ಲಿ ಹೋಗಿ ಧ್ವನಿ ಎತ್ತಬೇಕೋ ಅಲ್ಲಿ ಇವರು ಮಾತಾಡುತ್ತಿಲ್ಲ. ಮೊದಲು ಬಿಜೆಪಿಯವರು ವಿಪಕ್ಷ ನಾಯಕರನ್ನು ಆಯ್ಕೆ ಮಾಡಲಿ. ಗುತ್ತಿಗೆದಾರರು ಕಮಿಷನ್ ಕೇಳಿದ್ದಾರೆ ಅಂತಾ ಹೇಳಿಲ್ಲ. ಬಾಕಿ ಬಿಲ್ ಪಾವತಿ ವಿಳಂಬ ಆಗ್ತಿದೆ ಅಂತಾ ಮಾತ್ರ ಹೇಳಿದ್ದಾರೆ. ಕೆಲಸ ಆಗಿದ್ರೆ ಹಣ ಬಿಡುಗಡೆ ಮಾಡೋದಾಗಿ ಸಿಎಂ ಹೇಳಿದ್ದಾರೆ. ಪರಿಶೀಲಿಸಿ ಹಣ ಬಿಡುಗಡೆ ಮಾಡುವುದಾಗಿ ಡಿಸಿಎಂ ಹೇಳಿದ್ದಾರೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಗ್ಯಾರಂಟಿ ಯೋಜನೆಗೆ SCP, TSP ಹಣ ಬಳಕೆ ಆರೋಪ ವಿಚಾರಕ್ಕೆ ಸಂಬಂಧಿಸಿ SCP, TSP ಬಗ್ಗೆ ಬಿಜೆಪಿಯವರು ಸರಿಯಾಗಿ ಅರ್ಥ ಮಾಡಿಕೊಂಡಿಲ್ಲ. ಬಿಜೆಪಿ ಅವಧಿಯಲ್ಲಿ SCP-TSP $10 ಸಾವಿರ ಕೋಟಿ ಬಳಕೆ ಆಗಿತ್ತು. ನಾವು ಗ್ಯಾರಂಟಿ ಯೋಜನೆಗೆ ಅದನ್ನೇ ಬಳಸಿಕೊಳ್ತಿದ್ದೇವೆ. ಕಾನೂನು ಬಿಟ್ಟು ಏನು ಮಾಡ್ತಿಲ್ಲ, ಕಾನೂನು ಉಲ್ಲಂಘನೆಯೂ ಆಗಿಲ್ಲ. ಎಸ್ಸಿ, ಎಸ್ಟಿ ಹಣ ದುರುಪಯೋಗ ಆಗುತ್ತಿಲ್ಲ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA