ಬಿಬಿಎಂಪಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಗಾಯಗೊಂಡ ನೌಕರರು ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಬೆಂಕಿ ಅವಘಡದಲ್ಲಿ ಬಿಬಿಎಂಪಿ ನೌಕರರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು. ಈ ಸಂಬಂಧ ಗಾಯಾಳುಗಳ ಆರೋಗ್ಯ ವಿಚಾರಿಸಲು ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ ಬಂದಿದ್ದು, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಸಿಎಂ ಮಾಹಿತಿ ಪಡೆದರು.
ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಬೆಂಕಿ ಬಿದ್ದಿದೆ: ಇದಕ್ಕೂ ಮುನ್ನ ಬೆಳಗಾವಿಯಲ್ಲಿ ಈ ಅವಘಡ ಕುರಿತಂತೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಬಿದ್ದಿದೆ ಎಂದು ಹೇಳುತ್ತಿದ್ದಾರೆ. ಆಕಸ್ಮಿಕ ಬೆಂಕಿಯಿಂದ ಕೆಲವರಿಗೆ ಗಾಯವಾಗಿದೆ. ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಬೆಂಕಿ ಬಿದ್ದಿದೆ. ನಾವು ಅಲ್ಲಿಗೆ ಹೋಗಿ ನೋಡಿದ ಮೇಲೆ ಎಲ್ಲಾ ತಿಳಿಯುತ್ತದೆ ಎಂದಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


