ಬೆಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಹಿಂಬಾಲಿಸಿದ ಖದೀಮನೊಬ್ಬ ಸರ ಕಸಿದುಕೊಂಡು ಪರಾರಿಯಾದ ಘಟನೆ ಎನ್‌ಆರ್‌ಐ ಬಡಾವಣೆಯ 5ನೇ ಕ್ರಾಸ್ ನ ಮಾರುತಿ ಪ್ರತೀಕ್ ಅಪಾರ್ಟ್‌ಮೆಂಟ್ ಮುಂಭಾಗದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆಗಸ್ಟ್ 9ರ ರಾತ್ರಿ 8.30ರ ವೇಳೆ ಮೊಮ್ಮಗಳ ಜೊತೆ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಯನ್ನು ಫಾಲೋ ಮಾಡಿದ ಸರಗಳ್ಳ, ಹಿಂಬದಿಯಿಂದ ಕೈಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಳೆದಿದ್ದಾನೆ. ಸರ ಎಳೆದ ರಭಸಕ್ಕೆ ವೃದ್ಧ ಕೆಳಗೆ ಬಿದ್ದಿದ್ದಾರೆ. ಖದೀಮ ಸ್ಥಳದಿಂದ ಪರಾರಿಯಾಗಿದ್ದಾನೆ.
ಸರಗಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸರಗಳ್ಳನಿಗೆ ಶೋಧ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


