ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಳ ಮೇಲೆ ನಿಯಂತ್ರಣ ಹೊಂದುವ ಸಂಬಂಧ ಕೇಂದ್ರ ಸರ್ಕಾರ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ದೆಹಲಿ ಸೇವಾ ಮಸೂದೆಗೆ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ 2023ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಇದರೊಂದಿಗೆ, ಈ ಮಸೂದೆಯು ಕಾನೂನಾಗುತ್ತದೆ ಮತ್ತು ಕೇಂದ್ರ ಸರ್ಕಾರ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಸೇವಾ ಮಸೂದೆಯನ್ನು ಆಗಸ್ಟ್ 3 ರಂದು ಲೋಕಸಭೆಯಲ್ಲಿ ಮತ್ತು ಆಗಸ್ಟ್ 7 ರಂದು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿತ್ತು.
ಈ ಕಾಯಿದೆಯು ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ದೆಹಲಿ ಸರ್ಕಾರದ ಅಧಿಕಾರಿಗಳ ವರ್ಗಾವಣೆ ಮತ್ತು ಪೋಸ್ಟಿಂಗ್ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನೀಡುತ್ತದೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ಕೇಂದ್ರ ಸರ್ಕಾರದ ನಿಯಂತ್ರಣ ಮತ್ತಷ್ಟು ಹೆಚ್ಚಾಗಲಿದೆ ಎಂದು ವರದಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ:
https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


