ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಅವರು ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವಾಗ ಹೇಳಿದ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂಬ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಜಾತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ, ಸಮಾಜ ಕಲ್ಯಾಣ ಇಲಾಖೆಯಿಂದ ನಟ ಉಪೇಂದ್ರನ ವಿರುದ್ಧ ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ನಟ ಉಪೇಂದ್ರ ಅವರ ಹೇಳಿಕೆಯ ಕುರಿತು ರಾಜ್ಯಾದ್ಯಂತ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಬೆಂಗಳೂರಿನ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಿದ್ದಾರೆ. ಸಾಮಾಜಿಕ ಜಾಲತಾಣದ ಲೈವ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಪದ ಬಳಸಿದ್ದರು.
ಇದಾದ ನಂತರ, ಅವರೇ ಅಪ್ಲೋಡ್ ಮಾಡಿದ್ದ ವೀಡಿಯೋ ಡಿಲೀಟ್ ಮಾಡಿ ಕ್ಷಮೆ ಕೇಳಿದ್ದರು. ಆದರೂ, ಅವರ ವಿರುದ್ಧ ಸಾಮಾಜಿಕ ಜಾಲತಾಣ ಸೇರಿ ಭೌತಿಕವಾಗಿ ರಾಮನಗರ ಸೇರಿ ವಿವಿಧೆಡೆ ಪ್ರತಿಭಟನೆ ಕೂಡ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


