‘ರಾಜ್ಯದಲ್ಲಿ ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗಿನ ಅವಧಿಯಲ್ಲಿ ಸಂಭವಿಸಿರುವ ಅಪಘಾತಗಳಲ್ಲಿ 37 ಮಂದಿ ಮೃತಪಟ್ಟಿದ್ದಾರೆ’ ಎಂದು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
‘ಕರಾಳ ಶನಿವಾರ’ ಎಂಬುದಾಗಿ ಟ್ವಿಟ್ ಮಾಡಿರುವ ಅವರು, ‘ಭಾನುವಾರ ನಸುಕಿನಲ್ಲಿ ಚಿತ್ರದುರ್ಗದಲ್ಲಿ ಐವರು ಸಾವಿಗೀಡಾಗಿದ್ದಾರೆ. ಇದರಿಂದಾಗಿ, ರಾಜ್ಯದಲ್ಲಿ 24 ಗಂಟೆಯಲ್ಲಿ 37 ಮಂದಿ ಪ್ರಾಣ ಕಳೆದು ಕೊಂಡಂತಾಗಿದೆ’ ಎಂದಿದ್ದಾರೆ.
ಮೃತರಲ್ಲಿ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾರು ಪ್ರಯಾಣಿಕರು ಹಾಗೂ ಪಾದಚಾರಿಗಳು ಸಹ ಮೃತಪಟ್ಟಿದ್ದಾರೆ. ಬೈಕ್ ಸವಾರ ಹಾಗೂ ಹಿಂಬದಿ ಸವಾರ, ತಮ್ಮ ಸುರಕ್ಷತೆಗಾಗಿ ಹೆಲ್ಮಟ್ ಧರಿಸಿ ಸಂಚರಿಸಬೇಕು. ಕಾರು ಚಾಲಕರು, ರಾತ್ರಿ ಸಮಯದಲ್ಲಿ ಹೆಚ್ಚು ಜಾಗೃತಿ ವಹಿಸಬೇಕು’ ಎಂದೂ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


