ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆ. 15ರಂದು ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳು ಮಾಡಲಾಗಿದೆ.
ಆಕರ್ಷಕ ಪರೇಡ್, ಸಾಂಸ್ಕೃತಿಕ ಕಾರ್ಯಕ್ರಮ, ಸೇನಾ ಸಿಬ್ಬಂದಿಯಿಂದ ಮೈ ನವಿರೇಳಿಸುವ ಮೋಟಾರ್ ಬೈಕ್ ಸಾಹಸ ಪ್ರದರ್ಶನಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಗಣ್ಯರು, ಸಾರ್ವಜನಿಕರು ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಂಭ್ರಮ ಕಣ್ತುಂಬಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂದು ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಮುಖ್ಯಮಂತ್ರಿ ಅವರು ತೆರೆದ ಜೀಪಿನಲ್ಲಿ ಪರೇಡ್ ತುಕಡಿಗಳ ಪರಿವೀಕ್ಷಣೆ ನಡೆಸಿ, ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ’ ಎಂದು ವಿವರಿಸಿದರು.
‘ಪರೇಡ್ ನಲ್ಲಿ ಬಿಎಸ್‌ಎಫ್, ಮಹಿಳಾ ಸಿಆರ್‌ಪಿಎಫ್, ಗೋವಾ ಪೊಲೀಸ್, ಮಹಿಳಾ ಕೆಎಸ್‌ಆರ್‌ಪಿ, ಕೆಎಸ್‌ಆರ್‌ಪಿ, ಸಿಎಆ, ಕೆಎಸ್‌ಐಎಸ್‌ಎಫ್ ಎನ್‌ಸಿಸಿ ಸಶಸ್ತ್ರ ತುಕಡಿಗಳು ಹಾಗೂ ಪೊಲೀಸ್ ತಂಡಗಳು ಭಾಗವಹಿಸಲಿವೆ. ಹೋಂ ಗಾರ್ಡ್ಸ್, ಟ್ರಾಫಿಕ್ ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಡಾಗ್ ಸ್ಕ್ಯಾಡ್, ರಮಣಶ್ರೀ ಅಂಧರ ಶಾಲೆ ವಿದ್ಯಾರ್ಥಿಗಳು ಮತ್ತು ಸಮರ್ಥನಂ ಅಂಗವಿಕಲ ಮಕ್ಕಳು ಅವರಿಗೆ ಸಾಥ್ ನೀಡಲಿದ್ದಾರೆ. ಬ್ಯಾಂಡ್ ನ 38 ತುಕಡಿಗಳಲ್ಲಿ ಸುಮಾರು 1, 350 ಜನ ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗಾಗಿ ಇರುವ ವೀಕ್ಷಣಾ ಗ್ಯಾಲರಿಯನ್ನು ವಿಸ್ತರಿಸಿ ಹೆಚ್ಚು ಸಾರ್ವಜನಿಕರು ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


