ಬಿಎಂಟಿಸಿ ಬಸ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಹಾಡಹಗಲೇ ಕಂಡೆಕ್ಟರ್ ಹಾಗೂ ಇಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿರುವ ಘಟನೆ ನಡೆದಿದೆ.
9 ನೇ ತರಗತಿಯ ಖಾಸಗಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿ ದೊಮ್ಮಲೂರಿನಿಂದ ರಿಚಂಡ್ ಸರ್ಕಲ್ ಗೆ ಪ್ರಯಾಣ ಮಾಡುತ್ತಿದಳು. ಶಕ್ತಿ ಯೋಜನೆಯಡಿ ಫ್ರೀ ಟಿಕೆಟ್ ಗೆ ಅಂತ ಆಧಾರ್ ಕಾರ್ಡ್ ತೋರಿಸಿದ್ದಾಳೆ. ಆದರೆ ಆಧಾರ್ ಕಾರ್ಡ್ ನಲ್ಲಿ ಹಿಂದಿ ಬರಹ ಇದ್ದಿದ್ದಕ್ಕೆ ದುಡ್ಡು ಕೊಟ್ಟು ಟಿಕೆಟ್ ಖರೀದಿ ಮಾಡುವಂತೆ ಕಂಡೆಕ್ಟರ್ ಹೇಳಿದ್ದಾರೆ.
ವಿದ್ಯಾರ್ಥಿನಿ ದುಡ್ಡು ಕೊಟ್ಟು ಟಿಕೆಟ್ ಪಡೆದ್ರೂ, ವಿದ್ಯಾರ್ಥಿನಿಯ ಆಧಾರ್ ತೆಗೊಂಡು ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರ ಮುಂದೆ ನಿಂದಿಸಿದ್ದಾನೆ. ಈ ವೇಳೆ ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರು ಕೂಡ ಕಂಡೆಕ್ಟರ್ ಗೆ ಸಾಥ್ ನೀಡಿ, ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ. ಬಳಿಕ ವಿದ್ಯಾರ್ಥಿನಿಯನ್ನು ರಿಚ್ಯಂಡ್ ಸರ್ಕಲ್ ನಲ್ಲಿ ಇಳಿಸದೇ, ಕಾರ್ಪೋರೇಶನ್ ಸರ್ಕಲ್ ಬಳಿ ಇಳಿಸಿ ಹೋಗಿದ್ದಾರೆ. ಬಳಿಕ ಮನೆ ತಲುಪಿದ ವಿದ್ಯಾರ್ಥಿಯು ತನ್ನ ತಾಯಿ ಬಳಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಹಾಗಾಗಿ ತಾಯಿ ಕಂಡೆಕ್ಟರ್, ಹಾಗೂ ಪ್ರಯಾಣಿಕರ ವಿರುದ್ಧ ಪೊಲೀಸ್ ಠಾಣೆಯಲ್ಲು ದೂರು ದಾಖಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA