2024 ರ ಲೋಕಸಭಾ ಚುನಾವಣೆಗೆ ಹಾವೇರಿ ಗದಗ ಕ್ಷೇತ್ರದಿಂದ ನನ್ನ ಪುತ್ರ ಕೆ. ಇ. ಕಾಂತೇಶ್ ಕೂಡ ಪ್ರಬಲ ಆಕಾಂಕ್ಷಿ ಎಂದು ಮಾಜಿ ಉಪ-ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.
ಇಂದು ಲೋಕಸಭಾ ಚುನಾವಣೆಯ ತಯಾರಿ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, ನನ್ನ ಪುತ್ರ ಕೆ. ಇ. ಕಾಂತೇಶ್ ಕೂಡ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ಗಾಗಿ ಪ್ರಯತ್ನ ಮಾಡುತ್ತಿದ್ದಾನೆ. ಹಾಲಿ ಶಿವಮೊಗ್ಗ ಕ್ಷೇತ್ರ ಬಿ. ವೈ. ರಾಘವೇಂದ್ರ ಅವರು ಸಂಸದರಾಗಿದ್ದಾರೆ.
ಅವರಿಗೆ ಶಿವಮೊಗ್ಗ ಕ್ಷೇತ್ರದ ಟಿಕೆಟ್ ನೀಡಲಾಗುವುದು. ಆದ್ರೆ, ಹಾವೇರಿ ಗದಗ ಕ್ಷೇತ್ರದ ಹಾಲಿ ಸಂಸದ ಶಿವಕುಮಾರ್ ಉದಾಸಿ ಅವರು ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಅಂತಾ ಹೇಳಿದ್ದಾರೆ. ಹೀಗಾಗಿ, ನನ್ನ ಪುತ್ರ ಆ ಕ್ಷೇತ್ರದ ಟಿಕೆಟ್ ಪಡೆಯಲು ಪ್ರಯತ್ನ ಮಾಡುತ್ತಿದ್ದಾನೆ ಎಂದು ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


