‘ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಲು ವೈದ್ಯರು ಬಯಸುತ್ತಿಲ್ಲ. ಕನಿಷ್ಠ ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ವೈದ್ಯರು ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದ್ದೇವೆ’ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ಟಿ. ಬೇಗೂರು ಗ್ರಾಮದಲ್ಲಿ ಭಾನುವಾರ ನಡೆದ ಡಾ. ಬಿ. ರಮಣ ರಾವ್ ಅವರ ‘ವಿಲೇಜ್ ಕ್ಲಿನಿಕ್’ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಹೃದ್ರೋಗ ತಜ್ಞ ಡಾ. ಬಿ. ರಮಣ ರಾವ್ ಅವರನ್ನು ಸನ್ಮಾನಿಸಿ ಮಾತನಾಡಿದರು.
‘ಹಳ್ಳಿಗಳಲ್ಲಿ ಆರೋಗ್ಯ ಜಾಗೃತಿಯ ಅವಶ್ಯಕತೆಯಿದೆ. ಜಿಲ್ಲೆಗಳಲ್ಲಿ ಇರುವ ಎಲ್ಲ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಎಂಆರ್‌ಐ ಮತ್ತು ಸಿಟಿ ಸ್ಕ್ಯಾನ್ ಸೌಲಭ್ಯಗಳನ್ನು ಪ್ರಾರಂಭಿಸಲು ನಮ್ಮ ಸರ್ಕಾರ ಅನುದಾನ ನೀಡಿದೆ’ ಎಂದು ವಿವರಿಸಿದರು.
‘ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಸೇವೆ ನೀಡುತ್ತಿರುವ ಡಾ. ರಮಣ ರಾವ್ ಅವರ ಕಾರ್ಯ ಪದಗಳಿಗೆ ಮೀರಿದ್ದು. ಪ್ರತಿ ವರ್ಷ ವೈದ್ಯಕೀಯ ಪದವಿ ಪಡೆಯುವವರು ರಮಣ ರಾವ್ ಅವರಿಂದ ಸ್ಫೂರ್ತಿ ಪಡೆಯಬೇಕು’ ಎಂದು ಸಲಹೆ ನೀಡಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದರಾದ ಕೆ. ಬಿ. ಕೃಷ್ಣಮೂರ್ತಿ ಮತ್ತು ಪಿ. ಸಿ. ಮೋಹನ್, ಶಾಸಕರಾದ ಜಿ. ಟಿ. ದೇವೇಗೌಡ, ಆರ್. ವಿ. ದೇಶಪಾಂಡೆ, ಮಾಜಿ ಸಚಿವ ಆರ್. ರೋಷನ್ ಬೇಗ್, ನ್ಯಾಯಮೂರ್ತಿ ಬಿ. ಪದ್ಮರಾಜ್, ಮಾಜಿ ಕ್ರಿಕೆಟ್ ಆಟಗಾರ ವಿ. ವಿ. ಎಸ್. ಲಕ್ಷ್ಮಣ್ ಭಾಗವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


