ಕಾಂಗ್ರೆಸ್‌ನವರು ಸಮಾನತೆ ತರುತ್ತೇವೆ ಎಂದು ಹೇಳ್ತಾರೆ. ಇವರು ಯಾವುದರಲ್ಲಿ ಸಮಾನತೆ ತರುತ್ತಾರೆ. ಪುಕ್ಕಟೆ ಕೊಡುವ ಮೂಲಕ ಎಲ್ಲರೂ ಕೈ ಒಡ್ಡುವಂತೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ದುಡಿಯುವ ಕೈಗಳಿಗೆ ಶಕ್ತಿ ತುಂಬುವ ಬದಲು, ಈ ರೀತಿ ಮಾಡುತ್ತಿದ್ದಾರೆ. ದೇಶದ ಆರ್ಥಿಕ ಸಂಪತ್ತು ವೃದ್ಧಿ ಆಗುತ್ತಿದೆ. ಆದರೆ, ಆ ಸಂಪತ್ತು ಎಲ್ಲರಿಗೂ ತಲುಪುವ ಕೆಲಸವಾಗುತ್ತಿಲ್ಲ. ಕೇವಲ ಕೆಲವು ಜನರಿಗೆ ತಲುಪುತ್ತಿದೆ. ನಮ್ಮ ದೇಶದಲ್ಲಿ ನೂರಾರು ಈಸ್ಟ್ ಇಂಡಿಯಾ ಕಂಪನಿಗಳು ಹುಟ್ಟಿಕೊಂಡಿವೆ. ಸ್ವಾತಂತ್ರ್ಯ ಬಂದ ನಂತರವೂ ಈಸ್ಟ್ ಇಂಡಿಯಾ ಕಂಪನಿಯ ಪಳಿಯುಳಿಕೆಗ ಳಾಗಿ ಎರಡು ಪಕ್ಷಗಳು ನಮ್ಮಲ್ಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


