ಹರಿಯಾಣದ ನುಹ್ ಮತ್ತು ಗುರುಗ್ರಾಮ್ ನಲ್ಲಿ ನಡೆದ ಕೋಮು ಗಲಭೆಗೆ ಸಂಬಂಧಿಸಿದಂತೆ ಬಜರಂಗದಳ ಸದಸ್ಯ ಮತ್ತು ಗೋರಕ್ಷಕ ಬಿಟ್ಟು ಬಜರಂಗಿಯನ್ನು ಬಂಧಿಸಲಾಗಿದೆ. ಬಿಟ್ಟು ಮತ್ತು ಅವರ ಬಜರಂಗದಳದ ಕಾರ್ಯಕರ್ತ ಮೋನು ಮಾನೇಸರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಹಿಂಸಾಚಾರವನ್ನು ಪ್ರಚೋದಿಸಲಾಗಿದೆ ಎಂಬ ಆರೋಪದ ನಡುವೆ ಬಂಧಿಸಲಾಗಿದೆ.
ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಿಟ್ಟು ಬಜರಂಗಿಯನ್ನು ಹಿಂಸಾಚಾರ ನಡೆದ 20 ದಿನಗಳ ನಂತರ ಫರಿದಾಬಾದ್ ನ ಆತನ ಮನೆಯ ಬಳಿ ಬಂಧಿಸಲಾಗಿದ್ದು, ಕೇಸರಿ ಬಟ್ಟೆಯಲ್ಲಿ ನಡೆದುಕೊಂಡು ಆಯುಧಗಳನ್ನು ಪ್ರದರ್ಶಿಸಿ ಪ್ರಚೋದನಕಾರಿ ಹಾಡುಗಳನ್ನು ಹಾಡುತ್ತಿರುವ ವಿಡಿಯೋದಲ್ಲಿ ಬಿಟ್ಟು ಬಜರಂಗಿ ಬಿಡುಗಡೆ ಮಾಡಿದ್ದಾರೆ. ಮಫ್ತಿಗೆ ಬಂದ ಪೊಲೀಸ್ ತಂಡ ಬಿಟ್ಟು ಬೆನ್ನತ್ತಿ ಹಿಡಿದು ಬಂಧಿಸಿರುವ ಸಿಸಿಟಿವಿ ದೃಶ್ಯಾವಳಿ ಬಿಡುಗಡೆಯಾಗಿದೆ.
ಬಿಟ್ಟು ಅವರ ವಿರುದ್ಧ ಗಲಭೆ, ಹಿಂಸಾಚಾರ, ಬೆದರಿಕೆ, ಕೆಲಸಕ್ಕೆ ಅಡ್ಡಿಪಡಿಸುವುದು, ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಮತ್ತು ಮಾರಕ ಆಯುಧದಿಂದ ಹಲ್ಲೆ ಮಾಡಿದ ಆರೋಪಗಳನ್ನು ಹೊರಿಸಲಾಗಿದೆ.
ಮಾರ್ಕೆಟ್ ನಲ್ಲಿ ಹಣ್ಣು ತರಕಾರಿ ವ್ಯಾಪಾರಿಯಾಗಿರುವ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿ ಕಳೆದ ಮೂರು ವರ್ಷಗಳಿಂದ ಗೋಸಂರಕ್ಷಣಾ ಗುಂಪಿನ ನಾಯಕ. ಕಳೆದ ತಿಂಗಳೊಂದರಲ್ಲೇ ಅವರ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಮೂರು ಪ್ರಕರಣಗಳು ದಾಖಲಾಗಿದ್ದವು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


