ಉತ್ತರ ಪ್ರದೇಶದ ವಾರಣಾಸಿಯ ಜನ್ಸಾ ಪೊಲೀಸ್ ಠಾಣೆ ವ್ಯಾಪ್ತಿಯ ಸಜೋಯ್ ಗ್ರಾಮದ ನಿವಾಸಿ ಧೀರಜ್ ಶ್ರೀವಾಸ್ತವ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಸೋಮವಾರ ಹಿರಿಯ ಮಗನ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.
ಆಗ ಕಿರಿಯ ಮಗ ಫ್ರಾಂಜಾಲ್ (8) ಕೇಕ್ ತುಂಡು ತಿಂದಿದ್ದಾನೆ. ಆದರೆ ಕೇಕ್ ತುಂಡು ಗಂಟಲಿನಲ್ಲಿ ಸಿಲುಕಿಕೊಂಡಿತ್ತು. ಬಳಿಕ ಪೋಷಕರು ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
2 ದಿನಗಳ ಚಿಕಿತ್ಸೆ ಬಳಿಕ ಬಾಲಕ ಮೃತಪಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಹಿರಿಯ ಮಗನ ಹುಟ್ಟು ಹಬ್ಬವನ್ನು ಕುಟುಂಬ ಸಮೇತರಾಗಿ ಆಚರಿಸಿದ್ದು, ಇದೀಗ ಕಿರಿಯ ಮಗನ ಸಾವಿನಿಂದ ದುಃಖದಲ್ಲಿ ಮುಳುಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


