ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ಮತ್ತು ಬಾಳೆಹಣ್ಣುಗಳನ್ನು ವಿತರಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸುವ ಯೋಜನೆ ಆ.18ರಿಂದ ಜಾರಿಗೆ ಬರಲಿದೆ. ಮೊದಲು ಮಂಡ್ಯ ಜಿಲ್ಲೆಯಲ್ಲಿ ಈ ಯೋಜನೆ ಉದ್ಘಾಟನೆಯಾಗಲಿದೆ ಎಂದು ಮಾಹಿತಿ ನೀಡಿದ್ದಾರೆ,
ಈ ಯೋಜನೆಯನ್ನು 10ನೇ ತರಗತಿವರೆಗೆ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗುತ್ತಿದೆ. ಮಧ್ಯಾಹ್ನದ ಊಟದ ಜತೆಗೆ ಮೊಟ್ಟೆ, ಬಾಳೆಹಣ್ಣು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ಹಿಂದೆ ಶಾಲಾ ಆವರಣದಲ್ಲಿ ಮೊಟ್ಟೆಗಳನ್ನು ವಿತರಿಸದಂತೆ ಒಂದು ವರ್ಗದಿಂದ ಸಾಕಷ್ಟು ವಿರೋಧ ಕೇಳಿ ಬಂದಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


