ತುಮಕೂರು: ಬಟ್ಟೆ ತೊಳೆಯಲು ಕೆರೆ ಬಳಿ ಹೋಗಿದ್ದ ಮಹಿಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತ ಪಟ್ಟಿರುವ ಘಟನೆ ತುಮಕೂರು ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸೌಂದರ್ಯ(26) ಮೃತ ಮಹಿಳೆಯಾಗಿದ್ದಾರೆ. ಗೋಕಟ್ಟೆಗೆ ಬಟ್ಟೆ ತೊಳೆಯಲು ಹೋಗಿದ್ದ ಮಹಿಳೆ ಕಾಲು ಜಾರಿ ಬಿದ್ದಿದ್ದರೆ, ಸ್ಥಳದಲ್ಲಿ ಯಾರು ಇಲ್ಲದ ಹಿನ್ನೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಲು ಸಾಧ್ಯವಾಗಿಲ್ಲ.
ತಿಮ್ಮನಾಯಕನಹಳ್ಳಿಯ ತವರು ಮನೆಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಗುರುವಾರ ಮದ್ಯಾಹ್ನ ಬಟ್ಟೆತೊಳೆಯಲು ಗೋಕಟ್ಟೆಗೆ ಹೋಗಿದ್ದ ಸೌಂದರ್ಯ, ಮನೆಗೆ ವಾಪಸ್ ಬಾರದೇ ಇದ್ದ ಕಾರಣ ಗಂಡನ ಮನೆಗೆ ಹೋಗಿರಬೇಕು ಎಂದು ಭಾವಿಸಿದ್ದರು.
ಶುಕ್ರವಾರ ಬೆಳಿಗ್ಗೆ ಗ್ರಾಮಸ್ತರು ಗೋಕಟ್ಟೆ ಬಳಿ ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸೌಂದರ್ಯ ಅವರ ಮೃತದೇಹ ಗೋಕಟ್ಟೆಯ ಬಳಿ ಪತ್ತೆಯಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.