ಮಹಾರಾಷ್ಟ್ರದ ಕಲ್ಯಾಣ್ ನಲ್ಲಿ ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕೆ 12 ವರ್ಷದ ಬಾಲಕಿಯನ್ನು ತಾಯಿಯ ಎದುರೇ ಚಾಕುವಿನಿಂದ ಇರಿದು ಕೊಂದ ಘಟನೆ ನಡೆದಿದೆ. ಕೊಲೆ ಮಾಡಿದ 20 ವರ್ಷದ ಯುವಕನನ್ನು ಸ್ಥಳದಲ್ಲೇ ಬಂಧಿಸಲಾಗಿದೆ.
ತಾಯಿಯ ಕಿರುಚಾಟ ಕೇಳಿ ಸ್ಥಳೀಯರು ದಾಳಿಕೋರನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಾಲಕಿಗೆ ಎಂಟು ಬಾರಿ ಇರಿದಿದ್ದಾನೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಅಪರಾಧಕ್ಕೆ ಬಳಸಿದ್ದ ಚಾಕುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


