ಬೆಂಗಳೂರು: ರಾಜ್ಯದಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯುವಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿರುವ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಳಿರೋದರಲ್ಲಿ ಯಾವುದೇ ತಪ್ಪಿಲ್ಲ.
ಕೇವಲ ಕಾವೇರಿ ವಿಚಾರ ಮಾತ್ರವಲ್ಲ, ಮಹದಾಯಿ, ಕೃಷ್ಣಾ ಸೇರಿದಂತೆ ಪ್ರಮುಖ ವಿಚಾರ ಬಗ್ಗೆ ಸರ್ವಪಕ್ಷಗಳ ಜತೆ ಚರ್ಚಿಸುವುದರಲ್ಲಿ ತಪ್ಪಿಲ್ಲ. ಸರ್ವಪಕ್ಷಗಳ ಸಭೆ ನಡೆಸುವ ಬಗ್ಗೆ ನಾವೂ ಆಲೋಚನೆ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.


