ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿ ಕೋಡಿಪಾಳ್ಯ ಗ್ರಾಮದಲ್ಲಿ ನಟ ಅಭಿಮಾನಿ ಭರತ್ (30) ನೇಣು ಹಾಕಿಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನ್ನ ಸಾವಿಗೆ ನಾನೇ ಕಾರಣ. ಪುನೀತ್ ಅಭಿಮಾನಿಯಾಗಿದ್ದು, ಅವರ ಸಾವನ್ನು ನೋಡಲಾಗುತ್ತಿಲ್ಲ. ಪುನೀತ್ ಹೋದ ಜಾಗಕ್ಕೆ ನಾನು ಹೋಗುತ್ತಿದ್ದೇನೆ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ
ಭರತ್ ಗಾರೆ ಕೆಲಸ ಮಾಡಿಕೊಂಡಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೃತನ ಕಣ್ಣುಗಳನ್ನು ಕುಟುಂಬದವರು ದಾನ ಮಾಡಿದ್ದಾರೆ. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.