ತುಮಕೂರು: ಮಾಂಸ ಮಾರಾಟ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಸುಮಾರು 70ರಿಂದ 80 ಕೆ.ಜಿ. ದನದ ಮಾಂಸ ವಶಕ್ಕೆ ಪಡೆದ ಘಟನೆ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ತುಮಕೂರಿನ ಮರಳೂರುದಿಣ್ಣೆಯಲ್ಲಿ ಈ ದಾಳಿ ನಡೆದಿದ್ದು, ಅಕ್ರಮವಾಗಿ ಮಾಂಸದ ಅಂಗಡಿಯಲ್ಲಿ ಗೋ ಮಾಂಸ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಇನ್ನೂ ಮಾಂಸದಂಗಡಿಗೆ ಪೊಲೀಸರು ದಾಳಿ ನಡೆಸಿದ ವೇಳೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ ಘಟನೆ ಕೂಡ ನಡೆಯಿತು. ಪೊಲೀಸರು ಹಾಗೂ ಸ್ಥಳೀಯರ ನಡುವೆ ವಾಗ್ವಾದ ಉಂಟಾಗಿದ್ದು, ಈ ವೇಳೆ ಪೊಲೀಸ್ ಅಧಿಕಾರಿಗಳು ಸ್ಥಳೀಯರನ್ನು ತೀವ್ರವಾಗಿ ತರಾಟೆಗೆತ್ತಿಕೊಂಡ ಘಟನೆಯೂ ನಡೆಯಿತು.