ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೇರಟ್ಟಿ ಗ್ರಾಮದ ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಅರ್ಜುನ ಆನೆ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಗೇರಟ್ಟಿ ಸಮೀಪದ ಕತ್ರಿ ಉಪ ಅರಣ್ಯ ಪ್ರದೇಶದಲ್ಲಿ ಕಾಡಾನೆಯನ್ನು ಸೆರೆ ಹಿಡಿದಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಜನರಿಗೆ ಉಪಟಳ ನೀಡುತ್ತಿದ್ದ ಕಾಡಾನೆಯನ್ನು ಸಾಕಾನೆಗಳ ಜೊತೆಗೆ 100ಕ್ಕೂ ಹೆಚ್ಚು ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ.


