ವಿಜಯಪುರ: ಡಿ.ಕೆ.ಶಿವಕುಮಾರ್ ಅವರು ಯಾವುದೇ ಕಾಲಕ್ಕೂ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಶುಕ್ರವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆಶಿ ಈಗ ಸೂಪರ್ ಸಿಎಂ ಆಗಿದ್ದಾರೆ. ಆದರೆ, ಯಾವ ಕಾಲಕ್ಕೂ ಸಿಎಂ ಆಗಲ್ಲ ಎಂದು ಭವಿಷ್ಯ ನುಡಿದರು.
ಸಿಎಂ ಕೂಡ ಸುಮ್ಮನೆ ಹುದ್ದೆಯಲ್ಲಿ ಇದ್ದಾರೆ. ಆದರೆ, ಆಡಳಿತ ಮಾತ್ರ ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ. ಇನ್ನು ಆರು ತಿಂಗಳಾಗಲಿ, ಐದು ವರ್ಷವೇ ಆಗಲೀ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಇರುತ್ತಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನವನ್ನು ಬಿಟ್ಟುಕೊಡುವುದಿಲ್ಲ, ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ, ಈ ಅವಧಿಯಲ್ಲಿ ಅವರೇ ಮೊದಲ ಮತ್ತು ಕೊನೆಯ ಸಿಎಂ ಎಂದು ತಿಳಿಸಿದರು.
ಕಾಂಗ್ರೆಸ್ ತಳಿ ರಾಕ್ಷಸರದ್ದು ಎಂದು ವಾಗ್ದಾಳಿ ನಡೆಸಿದ ಅವರು, ಬಿಜೆಪಿಗೆ ಓಟು ಹಾಕಿದವರು ರಾಕ್ಷಸರು ಎಂಬ ಸುರ್ಜೆವಾಲಾ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.


