ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆ ಪತಿಯಿಂದ ಪತ್ನಿಯ ಕೊಲೆ ನಡೆದಿದೆ.
ಪತ್ನಿ ಸುಲೋಚನಾ(45) ಕೊಲೆ ಮಾಡಿದ ಪತಿ ನಾಗರಾಜಪ್ಪ(48). ನಿತ್ಯ ಕುಡಿದು ಬಂದು ಪತ್ನಿ ಜತೆ ಗಲಾಟೆ ಮಾಡುತ್ತಿದ್ದ ನಾಗರಾಜಪ್ಪ ಕುಡಿದ ಮತ್ತಿನಲ್ಲಿ ಪತ್ನಿ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆ.
ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


