ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬರು ನುಂಗಿದ್ದ ನೈಲ್ ಕಟ್ಟರ್ ಅನ್ನು ಇಲ್ಲಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ.
ಇತ್ತೀಚೆಗೆ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಸ್ಥಳೀಯ ಕ್ಲಿನಿಕ್ ನಲ್ಲಿ ತಪಾಸಣೆ ಮಾಡಿಸಿಕೊಂಡ ಅವರು, ಸಿ. ಟಿ. ಸ್ಕ್ಯಾನ್ಗೆ ಒಳಗಾಗಿದ್ದರು. ಆಗ ಹೊಟ್ಟೆಯಲ್ಲಿ ಸಾಧನವೊಂದು ಇರುವುದು ದೃಢಪಟ್ಟಿತ್ತು.
ಮಣಿಪಾಲ್ ಆಸ್ಪತ್ರೆಯ ವೈದ್ಯರ ತಂಡವು ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ ನಡೆಸಿ, ನೆಲ್ ಕಟರ್ ಹೊರತೆಗೆದಿದೆ.
