ಲೇಡಿಸ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳನ್ನು ಯಾವುದೇ ನೋಟಿಸ್ ನೀಡದೇ ಪೊಲೀಸರು ಬಂದ್ ಮಾಡಿಸಿದ್ದು, ಸಿಬ್ಬಂದಿ ನಿರುದ್ಯೋಗಿಗಳಾಗಿದ್ದಾರೆ. ಅವರ ಕುಟುಂಬಗಳು ಬೀದಿಗೆ ಬಂದಿವೆ. ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳನ್ನು ಪುನರ್ ತೆರೆಯಲು ಅವಕಾಶ ನೀಡಬೇಕು’ ಎಂದು ಮಾಲೀಕರು ಹಾಗೂ ಸಿಬ್ಬಂದಿ ಆಗ್ರಹಿಸಿದ್ದಾರೆ.
ಕರ್ನಾಟಕ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಸಿಬ್ಬಂದಿಗಳ ಪ್ರತಿನಿಧಿಗಳು, ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ


