ಬೆಂಗಳೂರು : ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಟೆಂಪೋ ಚಾಲಕ ಎಚ್.ಕೆ. ಗಣೇಶ್ (23)ಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನಗರದ 1ನೇ ತ್ವರಿತ ವಿಶೇಷ ನ್ಯಾಯಾಲಯ (ಎಫ್ ಟಿಎಸ್ ಸಿ) ಆದೇಶ ಹೊರಡಿಸಿದೆ.
ಜ್ಞಾನಭಾರತಿ ಠಾಣೆಯಲ್ಲಿ 2019ರಲ್ಲಿ ದಾಖಲಾಗಿದ್ದ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶರಾದ ರೂಪಾ ಕೆ. ಎನ್. ನಡೆಸಿದ್ದರು. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ ವಾದಿಸಿದ್ದರು.


