ಬೆಂಗಳೂರು: ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿ ಮಹೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
‘ಸಿದ್ದಾಪುರ ಠಾಣೆಯ ರೌಡಿ ಪಟ್ಟಿಯಲ್ಲಿ ಹೆಸರಿದ್ದ ಮಹೇಶ್ ನನ್ನು ಆಗಸ್ಟ್ 4ರಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಮುಖ ಆರೋಪಿಯಾಗಿದ್ದ ರೌಡಿ ವಿಲ್ಸನ್ ಗಾರ್ಡನ್ ನಾಗ್ ಹಾಗೂ ಮೋಹನ್ ಅಲಿಯಾಸ್ ಡಬಲ್ ಮೀಟರ್ ತಲೆಮರೆಸಿಕೊಂಡಿದ್ದರು. ಇದೀಗ ಇಬ್ಬರೂ ನ್ಯಾಯಾಲಯಕ್ಕೆ ಶರಣಾಗಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.
2021ರಲ್ಲಿ ವಿಲ್ಸನ್ ಗಾರ್ಡನ್ ನಾಗನ ಗೆಳೆಯ ಮದನ್ ಬನಶಂಕರಿ ದೇವಾಲಯದ ಬಳಿಯ ರಸ್ತೆಯಲ್ಲಿ ಅಡ್ಡಹಾಕಿ ಮಹೇಶ ಕೊಚ್ಚಿ ಕೊಲೆ ಮಾಡಿದ್ದ. ಇದರ ದ್ವೇಷಕ್ಕೆ ನಾಗ ಕೊಲೆ ಮಾಡಿಸಿದ್ದ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಆರೋಪಿಗಳು ಕೋರ್ಟ್‌ಗೆ ಹಾಜರಾಗಿದ್ದಾರೆ.


