ಅತ್ಯಾಚಾರ ಪ್ರಕರಣದ ಆರೋಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಹಿರಿಯ ಅಧಿಕಾರಿಗಳ ಜೊತೆ ಅಶಿಸ್ತಿನಿಂದ ವರ್ತಿಸಿದ್ದ ಆರೋಪದಡಿ ಬಸವೇಶ್ವರನಗರ ಠಾಣೆ ಪಿಎಸ್ ಐ ಸತೀಶ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಪಿಎಸ್ ಐ ಸತೀಶ್ ವಿರುದ್ಧ ಕೇಳಿಬಂದಿದ್ದ ಆರೋಪದ ಬಗ್ಗೆ ತನಿಖೆ ನಡೆಸಿದ್ದ ಪಶ್ಚಿಮ ವಿಭಾಗದ ಡಿಸಿಪಿಯವರು ವರದಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಕಮಿಷನರ್ ಬಿ. ದಯಾನಂದ್, ಸತೀಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.


