ಗುಬ್ಬಿ: ಕಳ್ಳರು ಎರಡು ಅಂಗಡಿಗಳ ಬೀಗ ಮುರಿದು ಹಣ ದೋಚಿದ ಘಟನೆ ಮಹಾತ್ಮ ಗಾಂಧಿ ರಸ್ತೆಯಲ್ಲಿ ಮಂಗಳವಾರ ಮಧ್ಯ ರಾತ್ರಿ ನಡೆದಿದ್ದು, ಈ ವೇಳೆ ಪೊಲೀಸರು ಹಾಗು ಸ್ಥಳೀಯರು ಕಳ್ಳರನ್ನು ಹಿಡಿಯಲು ನಡೆಸಿದ ಯತ್ನ ವಿಫಲವಾಗಿದೆ.
ರಾತ್ರಿ ಕಳ್ಳರು ಅಂಗಡಿಗಳಿಂದ ಹಣ ದೋಚುತ್ತಿರುವುದನ್ನು ಕಂಡು ಗಸ್ತಿನಲ್ಲಿದ್ದ ಪೊಲೀಸರು ಕಳ್ಳರನ್ನು ಅಟ್ಟಿಸಿಕೊಂಡು ಹೋಗಿದ್ದಾರೆ. ಈ ವೇಳೆ ಸಾರ್ವಜನಿಕರೊಬ್ಬರು ನಾಡ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗಿದೆ.
ಗುಂಡು ಹಾರಿಸಿದ್ದರಿಂದ ಯಾರಿಗೂ ಯಾವುದೇ ಅಪಾಯವಾಗಿಲ್ಲ ಎನ್ನಲಾಗಿದೆ. ಪೊಲೀಸರು ಸಾರ್ವಜನಿಕರು ಹಿಡಿಯುವ ಮುನ್ನವೇ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇನ್ನೂ ಕಳ್ಳತನದ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.