ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆ ಎದುರಾಗಲಿದೆ. ರಾಜ್ಯವನ್ನು ಕಗ್ಗತ್ತಲಲ್ಲಿ ಮುಳುಗಿಸುವ ಕೆಲಸ ಸರ್ಕಾರ ಮಾಡ್ತಿದೆ ಎಂದು ಮಂಡ್ಯದಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಲ್ಲಿ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದೆ. ಆದರೆ ಮಧ್ಯಮ ವರ್ಗದವರ ಕರೆಂಟ್ ಬಿಲ್ ಡಬಲ್ ಬರುತ್ತಿದೆ. ಇದರಿಂದ ಸಣ್ಣ, ಮಧ್ಯಮ ಕೈಗಾರಿಕೆಗಳು ಸಂಕಷ್ಟಕ್ಕೆ ಸಿಲುಕಿವೆ.
ಒಬ್ಬರಿಂದ ಕಿತ್ತುಕೊಂಡು ಮತ್ತೊಬ್ಬರಿಗೆ ಕೊಡುವ ಕೆಲಸ ಆಗ್ತಿದೆ. ಉಚಿತ ಯೋಜನೆಗಳ ಹೆಸರಿನಲ್ಲಿ ಜನರಿಗೆ ಮೋಸ ಮಾಡ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ವಸ್ತುಗಳ ಬೆಲೆ ಏರಿಕೆಯಾಗಿ ಸಂಕಷ್ಟ ಎದುರಾಗಿದೆ ಎಂದು ವಾಗ್ದಾಳಿ ನಡೆಸಿದರು.


