ಬೆಂಗಳೂರಿನ ಸಂಪಂಗಿ ರಾಮನಗರದಲ್ಲಿ ಹೃದಯಾಘಾತ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಟೀ ಕುಡಿಯಲು ಆಟೋ ನಿಲ್ಲಿಸಿ ತೆರಳುತ್ತಿದ್ದ ಚಾಲಕ ತಿಮ್ಮೇಶ್, ಆಟೋದಿಂದಲೇ ಇಳಿಯುವಾಗ ಎದೆ ನೋವು ಕಾಣಿಸಿಕೊಂಡಿತ್ತು.
ಎದೆಯನ್ನು ಸಾವರಿಸಿಕೊಳ್ಳುತ್ತ ಆಟೋದಿಂದ ತಿಮ್ಮೇಶ್ ಇಳಿದು ಹೋಗುವ ಕೊನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂಲತಃ ಮಂಡ್ಯ ಜಿಲ್ಲೆಯ ತಿಮ್ಮೇಶ್, ಬೆಂಗಳೂರಿನಲ್ಲಿ ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದರು. ಈ ಸಂಬಂಧ ಸಂಪಂಗಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


