ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಲಕ್ಕಯ್ಯ ಬಡಾವಣೆಯ ಪೊಲಮ್ಮಾಸ್ ಹೋಟೆಲ್ ಬಳಿ ನಡೆದಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಪೊಲಮ್ಮಾಸ್ ಮೆಸ್ ಪಕ್ಕದ ಬಿಲ್ಡಿಂಗ್ ನ ಕೆಳಮಹಡಿಯಲ್ಲಿ ಅಡುಗೆ ಅನಿಲ ಸೋರಿಕೆ ಯಿಂದ ಸ್ಫೋಟ ಸಂಭವಿಸಿದೆ. ಪರಿಣಾಮ, ಕಟ್ಟಡದ ಹೊರಭಾಗದಲ್ಲಿ ಮಲಗಿದ್ದ ರವಿ (40) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪೊಲೀಸ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


