ಗೂಂಡಾ ಕಾಯ್ದೆಯಡಿ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಯಾಗಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ. ಎಸ್. ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ. ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠ, ಅರ್ಜಿಯಲ್ಲಿ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಅಧೀನ ಕಾರ್ಯದರ್ಶಿಗೆ ನೊಟೀಸ್ ಜಾರಿಗೊಳಿಸಿದೆ.


