ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್ ವೈಸರ್ ರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್ ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ ಬಂಧಿಸಿದೆ. ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಿನ್ನೆ ಶ್ರೀನಿವಾಸಮೂರ್ತಿ ಅವರ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದರು.
ದಾಳಿ ವೇಳೆ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ ಬಂಧಿಸಿ ವಿಚಾರಣೆಗೊಳಪಡಿಸಿದೆ.
ಬೆಂಗಳೂರಿನ ಕಲ್ಕೆರೆ ನಿವಾಸದ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಶ್ರೀನಿವಾಸ್ ಸೋದರಿ ಹಾಗೂ ಸೋದರನ ಮನೆ ಸೇರಿದಂತೆ 14 ಕಡೆ ದಾಳಿ ಮಾಡಿದ್ದರು. ರಿಯಲ್ ಎಸ್ಟೇಟ್ ನಲ್ಲೂ ಹೂಡಿಕೆ ಮಾಡಿರುವ ಬಗ್ಗೆ ದಾಖಲೆ ಲಭ್ಯವಾಗಿವೆ. ಹೀಗಾಗಿ ಶ್ರೀನಿವಾಸ್ ಅವರನ್ನು ಬಂಧಿಸಿದ್ದು, ಆಸ್ತಿ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಇನ್ನು ಶ್ರೀನಿವಾಸ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದು, ಆ ವೇಳೆ ತಮ್ಮ ವಶಕ್ಕೆ ಕೇಳಲಿದ್ದಾರೆ ಎಂದು ಹೇಳಲಾಗುತ್ತಿದೆ.


