ನೃಪತುಂಗ ವಿಶ್ವವಿದ್ಯಾಲಯದ ಕುಲಪತಿ ಶ್ರೀನಿವಾಸ ಎಸ್. ಬಳ್ಳಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ (ಎನ್ ಇಪಿ) ಬೆಂಬಲಿಸಿ, ಉನ್ನತ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದಾರೆ.
ಕಸ್ತೂರಿರಂಗನ್ ನೇತೃತ್ವದಲ್ಲಿ ರಚಿಸಲಾದ ಎನ್ ಇಪಿ ರಾಜಕೀಯ ಹಿತಾಸಕ್ತಿಯಿಂದ ಹೊರತಾಗಿದೆ. ಕರ್ನಾಟಕದಲ್ಲಿ ಜಾರಿಗೊಳಿಸಲಾದ ಹೊಸ ನೀತಿಯು ತ್ರಿಭಾಷಾ ಸೂತ್ರವನ್ನು ಒಳಗೊಂಡಿದ್ದು, ಮಾತೃ ಭಾಷೆಯಲ್ಲೂ ಕಲಿಕೆಗೆ ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯ ಜತೆಗೆ ಇತರೆ ಭಾಷೆಗಳ ಆಯ್ಕೆಯ ಸ್ವಾತಂತ್ರ್ಯ ನೀಡಲಾಗಿದೆ.


