ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಇಪ್ಪತ್ತು ಜನರು ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಉತ್ತರ ಪ್ರದೇಶದವರು. ನಿಂತಿದ್ದ ರೈಲಿಗೆ ಬೆಂಕಿ ಹತ್ತಿಕೊಂಡಿತು. ಬೆಂಕಿಯನ್ನು ಹತೋಟಿಗೆ ತರಲಾಯಿತು.
ಮಧುರೈ ರೈಲು ನಿಲ್ದಾಣದಲ್ಲಿ ನಿಂತಿದ್ದ ಲಕ್ನೋ-ರಾಮೇಶ್ವರಂ ಪ್ರವಾಸಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರೈಲಿನ ಪ್ಯಾಂಟ್ರಿಕಾರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಅಡುಗೆ ಅನಿಲ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ಸಂಶೋಧನೆಗಳು ತಿಳಿಸಿವೆ.


