ಜಾರ್ಖಂಡ್ ನ ರಾಂಚಿಯಲ್ಲಿ 12ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕನಿಂದ ಕಿರುಕುಳ. ಅತ್ಯಾಚಾರದ ದೃಶ್ಯಗಳನ್ನು ಆರೋಪಿ ತನ್ನ ಫೋನ್ ನಲ್ಲಿ ರೆಕಾರ್ಡ್ ಮಾಡಿ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಬಾಲಕಿಗೆ ಹಲವು ಬಾರಿ ಚಿತ್ರಹಿಂಸೆ ನೀಡಿದ್ದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಸಮೀದ್ ಕಶ್ಯಪ್ ಎಂಬ ಶಿಕ್ಷಕ 12ನೇ ತರಗತಿ ವಿದ್ಯಾರ್ಥಿಗೆ ಕಿರುಕುಳ ನೀಡಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ಶೋಷಣೆ ಮಾಡಿದ್ದಾರೆ ಎಂಬುದು ದೂರು. ಬಾಲಕಿಯ ತಾಯಿ ದೂರು ದಾಖಲಿಸಿದ್ದಾರೆ.
ಶಿಕ್ಷಕ ಸಂತ್ರಸ್ತೆಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದೂ ದೂರಿನಲ್ಲಿ ಆರೋಪಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಘಟನೆಯ ತನಿಖೆ ಪ್ರಗತಿಯಲ್ಲಿದೆ.


