ಬೆಂಗಳೂರು: ಪಾನಮತ್ತ ಚಾಲಕನೊಬ್ಬ ಲಾರಿಯನ್ನು ಅಡ್ಡಾದಿಡ್ಡಿ ಚಲಾಯಿಸಿ ಸರಣಿ ಅಪಘಾತವನ್ನುಂಟು ಮಾಡಿದ್ದು, ಬೈಕ್ ಸವಾರ ನೇಮಿರಾಜ್ (35) ಮೃತಪಟ್ಟಿದ್ದಾರೆ.
ಕಲ್ಯಾಣ ನಗರದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿರುವ ಅಪಘಾತದಲ್ಲಿ ಬೈಕ್, ಕಾರು ಸೇರಿ ಎಂಟು ವಾಹನಗಳು ಜಖಂಗೊಂಡಿವೆ. ಅಪಘಾತಕ್ಕೆ ಕಾರಣವಾಗಿರುವ ಲಾರಿ ಚಾಲಕ ಹಿಂದೂಪುರದ ಚಂದ್ರಶೇಖರ್ ನನ್ನು (37) ಬಂಧಿಸಲಾಗಿದೆ. ಲಾರಿ ಜಪ್ತಿ ಮಾಡಲಾಗಿದೆ ಎಂದು ಬಾಣಸವಾಡಿ ಸಂಚಾರ ಪೊಲೀಸರು ಹೇಳಿದರು.


