ಬೆಂಗಳೂರು: ಗಣೇಶ ಕೂರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗಲಾಟೆ ನಡೆದಿದೆ. ಧರ್ಮರಾಯಸ್ವಾಮಿ ದೇವಸ್ಥಾನದ ಬಳಿ ಗಲಾಟೆ ನಡೆದಿದ್ದು, ಅಜಿತ್ ಎಂಬುವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ.
ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ನಡೆದಿದ್ದು, ಆರೋಪಿ ಸುಮನ್ ಚಾಕುವಿನಿಂದ ಅಜಿತ್ ಎದೆ, ಕುತ್ತಿಗೆ, ಬೆನ್ನಿಗೆ ಇರಿದಿದ್ದಾನೆ. ಹಲ್ಲೆಗೊಳಗಾದ ಅಜಿತ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸುಮನ್ ನನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ.


