ಸ್ನೇಹಿತನೊಂದಿಗೆ ತೆರಳುತ್ತಿದ್ದ ಯುವತಿಯನ್ನು ನಿಂದಿಸಿದ್ದಲ್ಲದೇ, ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದ ಆರೋಪದಡಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಪೂರ್ವ ವಿಭಾಗದ ಸೈಬರ್ ಕೈಂ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಮೂಲದ ವಿದ್ಯಾರ್ಥಿಯ ವಿರುದ್ಧ 21 ವರ್ಷದ ಯುವತಿ ನೀಡಿದ ದೂರಿನ ಅನ್ವಯ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.


