ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರೆಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ತಿಂಗಳಲ್ಲಿ ಜಾರಿಗೊಳಿಸಲಾಗುವುದು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಸುಳಿವು ನೀಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ನಾಲ್ಕನೇ ಭರವಸೆಯಾಗಿರುವ ಗೃಹ ಲಕ್ಷ್ಮೀ ಯೋಜನೆ ನಾಳೆ ಜಾರಿಯಾಗುತ್ತಿದೆ. ಡಿಸೆಂಬರ್ ನಲ್ಲಿ ಯುವನಿಧಿ ಯೋಜನೆ ಜಾರಿಯಾಗಲಿದೆ ಎಂದರು.
ನಾಳೆ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಮೈಸೂರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಆಗಮಿಸಲಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದರು.


