ಬೆಂಗಳೂರು: ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯಕ್ಕೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಈ ಬಗ್ಗೆ ಅಪೋಲೊ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಕುಮಾರಸ್ವಾಮಿ ಅವರು ಸುಸ್ತು-ಆಯಾಸ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಗೆ ತಡರಾತ್ರಿ ಆಸ್ಪತ್ರೆ ದಾಖಲಾಗಿದ್ದು, ಸದ್ಯ ಕುಮಾರಸ್ವಾಮಿ ಅವರ ಆರೋಗ್ಯ ಚೇತರಿಕೆ ಕಂಡಿದೆ. ಡಾಕ್ಟರ್ ಪಿ.ಸತೀಶ್ ಚಂದ್ರ ನೇತೃತ್ವದಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಅಪೋಲೊ ಆಸ್ಪತ್ರೆ ಹೆಲ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದೆ.


