ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಬುಧವಾರ ಶಂಕಿತ ವಿಷಾನಿಲವನ್ನು ಉಸಿರಾಡಿ ಮೂವರು ಸಹೋದರರು ಸೇರಿದಂತೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ.
ರಾಮಾವತಾರ್ ಗುರ್ಜರ್ (35), ರಾಮನರೇಶ್ ಗುರ್ಜರ್ (40) ಮತ್ತು ವೀರಸಿಂಗ್ ಗುರ್ಜರ್ (30) ಮತ್ತು ಗಣೇಶ್ ಗುರ್ಜರ್ (40) ಮತ್ತು ಗಿರ್ರಾಜ್ ಗುರ್ಜರ್ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಜಿಲ್ಲೆಯ ಧನೇಲಾ ಪ್ರದೇಶದಲ್ಲಿರುವ ಸಾಕ್ಷಿ ಆಹಾರ ಉತ್ಪನ್ನಗಳ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಖಾನೆಯೊಳಗಿನ ಟ್ಯಾಂಕ್ ನಿಂದ ಅನಿಲ ಸೋರಿಕೆಯಾಗಿದೆ. ಅದನ್ನು ಸರಿಪಡಿಸಲು ತೆರಳಿದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ವಿಶಾನಿಲ ಉಸಿರಾಡಿ ಅಸ್ವಸ್ಥಗೊಂಡಿದ್ದ ಕಾರ್ಮಿಕರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಆದರೆ ಅದಾಗಲೇ ಅವರು ಮೃತಪಟ್ಟಿದ್ದರು. ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


