nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026
    Facebook Twitter Instagram
    ಟ್ರೆಂಡಿಂಗ್
    • ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
    • ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    • ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
    • ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದಾನಿಗಳು ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಿ, ಶಿಕ್ಷಕಿ ಶೋಭಾರವರ ಕಾಳಜಿ ಅಪಾರ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಹನುಮಂತರಾಯಪ್ಪ
    ಜಿಲ್ಲಾ ಸುದ್ದಿ August 31, 2023

    ದಾನಿಗಳು ಕಲಿಕೆಗೆ ಪೂರ್ವಕವಾಗಿ ಸಹಾಯ ಮಾಡಿ, ಶಿಕ್ಷಕಿ ಶೋಭಾರವರ ಕಾಳಜಿ ಅಪಾರ: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್. ಹನುಮಂತರಾಯಪ್ಪ

    By adminAugust 31, 2023No Comments2 Mins Read
    madhugiri

    ಮಧುಗಿರಿ: ಪ್ರತಿಫಲಾಕ್ಷೆ ಇಲ್ಲದೆ ಸಮಾಜಕ್ಕೆ ಕೊಡುಗೆ ನೀಡುವ ದಾನಿಗಳು ಸಮಾಜದಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತಾರೆ. ಕಾಯ ಅಳಿದರೂ ಕೀರ್ತಿ ಉಳಿದಿದೆ ಎನ್ನುವಂತೆ, ಕೊಟ್ಟ ಕೊಡುಗೆಗಳೆಲ್ಲಾ ಸಾರ್ಥಕತೆ ಕಾಣುತ್ತವೆ’ ಎಂದು ಮಧುಗಿರಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಎನ್. ಹನುಮಂತರಾಯಪ್ಪ ತಿಳಿಸಿದರು.

    ಪಟ್ಟಣದ ಕರಡಿಪುರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಒಂದನೇ ತರಗತಿಯ ನಲಿ-ಕಲಿ ಮಕ್ಕಳಿಗೆ ಶಾಲೆ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿ,
    ಸರಕಾರಿ ಶಾಲೆಗಳು ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಪಡಿಸುವುದರ ಜೊತೆಗೆ ಮಕ್ಕಳನ್ನು ಆಕರ್ಷಿಸಲು ಸುಂದರ ವಾತಾವರಣ ಅಗತ್ಯ. ಅದಕ್ಕೆ ಸರಕಾರಿ ಅನುದಾನಕ್ಕೆ ಕಾಯದೆ ದಾನಿಗಳ ಮನವೊಲಿಸಿ ಅಭಿವೃದ್ಧಿಪಡಿಸಲು ಮುಂದಾದ ನಮ್ಮ ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶಿಕ್ಷಕಿ ಶೋಭಾರವರು ದಾನಿಗಳ ಸಹಾಯದಿಂದ ಕರಡಿಪುರ ಸರಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ನಲಿಕಲಿ ಮಕ್ಕಳು ಹಾಸನದ ಮೇಲೆ ಕೂತು ಬೋಧನೆ ಮಾಡಲು ಹಾಸನದ ವ್ಯವಸ್ಥೆಯನ್ನು ಮಾಡಿದ್ದಾರೆ.

    ಇವರ ಈ ಕಾರ್ಯ ಮೊದಲನೆಯದಲ್ಲ ಶೋಭಾ ರವರು ಸರಕಾರಿ ಶಾಲೆಗಳ ಕೊರತೆಗಳನ್ನು ನೀಗಿಸುವುದಕ್ಕಾಗಿ ಹಾಗೂ ಮಕ್ಕಳ ಶಿಕ್ಷಣಕ್ಕೆ ಯಾವುದೇ ಅಡೆತಡೆಯಾಗದಂತೆ ದಾನಿಗಳ ಸಹಕಾರದಿಂದ ಸತತವಾಗಿ ಒಂದಲ್ಲ ಒಂದು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದು, ಇವರ ಈ ಕಾರ್ಯಕ್ಕೆ ನಮ್ಮ ಇಲಾಖೆಯ ಹಾಗೂ ನನ್ನ ಸಹಕಾರ ಎಂದಿಗೂ ಇರುತ್ತೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದರು.

    ಎಸ್ ಡಿ ಎಂ ಹನುಮಂತರಾಯಪ್ಪ ಮಾತನಾಡಿ, ಶೈಕ್ಷಣಿಕ ಪ್ರಗತಿ ನಲಿಕಲಿ ಮಕ್ಕಳಲ್ಲಿ ಉತ್ತಮವಾಗಿ ಬೆಳೆದರೆ ಮುಂದಿನ ವಿದ್ಯಾಭ್ಯಾಸಕ್ಕೆ ಉತ್ತಮ ಅನುಕೂಲವಾಗಲಿದೆ. ಈ ಆಲೋಚನೆಯಿಂದಾಗಿ ಶಿಕ್ಷಕಿ ಶೋಭಾ ಅವರು ದಾನಿಗಳ ಸಹಕಾರದಿಂದ ಶಾಲೆಯ ಮಕ್ಕಳಿಗೆ ಲೇಖನ ಸಾಮಗ್ರಿ ಹಾಗೂ ಕೂತು ಬೋಧನೆ ಮಾಡಲು ಅತ್ಯಗತ್ಯವಾದ ಹಾಸನದ ವ್ಯವಸ್ಥೆಯನ್ನು ಮಾಡಿದ್ದಾರೆ, ಸರಕಾರಿ ಶಾಲೆಯ ಮಕ್ಕಳು ಯಾವುದೇ ಖಾಸಗಿ ಶಾಲೆಗಳ ಮಕ್ಕಳಿಗಿಂತ ಕಡಿಮೆ ಇಲ್ಲ ಎಂಬಂತೆ ಶಿಕ್ಷಣ ಹಂತದಲ್ಲಿ ಪ್ರಗತಿ ಸಾಧಿಸಲಿ ಎಂದು ಆಶಿಸಿದರು.

    ದಾನಿಗಳಾದ ಕಾಂಟ್ರಾಕ್ಟರ್ ರವಿ ಮಾತನಾಡಿ, ಸರಕಾರಿ ಶಾಲೆ ಮಕ್ಕಳ ಕಲಿಕೆಗೆ ಅತ್ಯಗತ್ಯವಾದ ಲೇಖನ ಸಾಮಗ್ರಿಗಳು ಹಾಗೂ ಕೂತು ಬೋಧನೆ ಮಾಡಲು ಹಾಸನದ ವ್ಯವಸ್ಥೆಯನ್ನು ಒಂದನೇ ತರಗತಿ ನಲ್ಲಿ ಕಲಿ ಮಕ್ಕಳಿಗೆ ಮಾಡಿದ್ದು, ಶೀಘ್ರದಲ್ಲಿ ಎರಡನೇ ತರಗತಿ ಮಕ್ಕಳಿಗೂ ಸಹ ಹಾಸನದ ವ್ಯವಸ್ಥೆ ಮಾಡಿಕೊಡುವುದಾಗಿ ಭರವಸೆ ನೀಡಿ, ನಾನು ಸಹ ಸರಕಾರಿ ಶಾಲೆ ವಿದ್ಯಾರ್ಥಿ ನನಗೆ ಸರಕಾರಿ ಶಾಲೆಗಳ ಮೇಲೆ ಅಪಾರ ಪ್ರೀತಿ ಇದೆ, ಬಡ ಕುಟುಂಬದ ಮಕ್ಕಳಿಗೆ ಸರಕಾರಿ ಶಾಲೆಗಳು ಶಿಕ್ಷಣದ ದೇವಾಲಯಗಳಂತೆ ಕಾಣುತ್ತದೆ. ಈ ದೇವಾಲಯಗಳಿಗೆ ಶಕ್ತಿ ತುಂಬುವ ಕೆಲಸ ಸದಾ ಮಾಡುತ್ತೇನೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮುದ್ದಪ್ಪ, ಶಿಕ್ಷಕರಾದ ದಾಸಣ್ಣ, ತಿಮ್ಮರಾಜು ಗೌರೀಶ್ ದಾನಿಗಳಾದ ಗೌರೀಶ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ವರದಿ: ಅಬಿದ್ ಮಧುಗಿರಿ


    Provided by
    Provided by
    admin
    • Website

    Related Posts

    ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ

    July 6, 2026

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆಯ ಹೆಲ್ತ್ ಇನ್ಸ್ಪೆಕ್ಟರ್ ಒಬ್ಬರು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.